Date: 01-08-2024
Location: ಬೆಂಗಳೂರು
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸ್ವಾತಂತ್ಯ್ರ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50% ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನಿಂದ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪ್ರಾಧಿಕಾರದ ಆನ್ ಲೈನ್ (ಆನ್ ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ)ನಲ್ಲಿ ಕೂಡ ಶೇ.50% ರಷ್ಟು ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ , ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂ ಪ್ರಕಟಣೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ, ಕನ್ನಡ ಜನಶಕ್ತಿ ಕೇಂದ್ರ ಹಾಗೂ ನಾಡೋಜ ಡಾ. ಕಮಲಾ ಹಂಪನಾ ಸಾಹಿತ್ಯ ವೇದಿಕೆ, ಕನ್ನಡ ...
ವಿಜಯಪುರ: ಚೆನ್ನಮ್ಮ ವಿಜಯೋತ್ಯೋತ್ಸವದ ಸಹಯೋಗದಿಂದ ವಿಜಯಪುರ ಆಶ್ರಮ ರಸ್ತೆಯಲ್ಲಿನ ಶಾಂತಿನಿಕೇತನ ಪ್ರಾಥಮಿಕ ಪ್ರೌಢಶಾಲೆ ...
ಮೂಡುಬಿದರೆ: 2024ನೇ ಸಾಲಿನ 'ಆಳ್ವಾಸ್ ವಿರಾಸತ್' ಪ್ರಶಸ್ತಿಗೆ' ಹಿಂದೂಸ್ಥಾನಿ ಗಾಯಕ ಪಂಡಿತ್ ಎಂ. ವೆಂಕಟೇ...
©2024 Book Brahma Private Limited.