Date: 12-03-2025
Location: ಬೆಂಗಳೂರು
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ನೇ ಸಾಲಿನಲ್ಲಿ ಜನವರಿಯಿಂದ ಡಿಸೆಂಬರ್‌ವರೆಗೆ ಕನ್ನಡದಲ್ಲಿ ಪ್ರಕಟವಾದ ಕೃತಿಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ 'ಕನ್ನಡ ಪುಸ್ತಕ ಸೊಗಸು ಬಹುಮಾನ'ಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.
ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು ಚಿತ್ರ ಕಲಾವಿದರ ಪೂರ್ಣ ವಿಳಾಸ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು 29 ರೊಳಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು -02.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https:// kpp.kamataka.gov.in ಅಥವಾ ದೂರವಾಣಿ: 080-2248 4516/ 2210 77040.
ಬೆಂಗಳೂರು: "ಇಂದು ಪ್ರಶಸ್ತಿಯನ್ನು ಯಾರು ಕೊಡುತ್ತಿದ್ದಾರೆ, ಯಾರಿಂದ ಕೊಡಲಾಗುತ್ತೆ, ಎಲ್ಲಿ ಕೊಡುತ್ತಾರೆ ಎಂಬುದು ...
ಬೆಂಗಳೂರು: "ಕೃತಿಯು ರಂಗ ಪ್ರಯೋಗಕ್ಕೆ ತಕ್ಕಂತೆ ಇಲ್ಲ ಎಂದು ವಿಜಯ ಸಿಂಹ ಈ ಕೃತಿಯಲ್ಲಿ ಹೇಳಿದ್ದಾರೆ. ಆದರೆ, ನಾನು...
ಹಾಸನ: ಸಾಹಿತ್ಯ ಮತ್ತು ಸಂಸ್ಕೃತಿಯ ಮಹಾನದಿಯಂತೆ ಹರಿದು, ಜಗತ್ತಿನ ಓದುಗರ ಮನಸ್ಸು ಮೆಚ್ಚಿ, ಕನ್ನಡದ ಗರಿಮೆಯನ್ನು ವಿಶ್ವ...
©2025 Book Brahma Private Limited.