Date: 03-04-2025
Location: ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2024ನೇ ಸಾಲಿನ 'ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿ'ಗೆ ಕನ್ನಡ ಪರ ಹೋರಾಟಗಾರ ಗುರುದೇವ ನಾರಾಯಣ ಕುಮಾರ ಮತ್ತು ಲೇಖಕಿ ಡಿ.ಬಿ.ರಜಿಯಾ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ.
ಕನ್ನಡ ನಾಡು-ನುಡಿ, ಜಲ ಕುರಿತ ಚಿಂತಕರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ ಇಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.
ತಂದೆ ಜಿ.ನಾರಾಯಣ ಕುಮಾರ್ ಅವರ ಮಾರ್ಗದರ್ಶನದಲ್ಲಿ ಚಳವಳಿಗಳಲ್ಲಿ ಪಾಲ್ಗೊಂಡ ಗುರುದೇವ್ ಅವರು, ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಬಳ್ಳಾರಿಯ ಡಿ.ಬಿ.ರಜಿಯಾ ಅವರು ಕವಿತೆ ಮತ್ತು ಕಥಾ ಪ್ರಕಾರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.
ಲಂಡನ್: ಪ್ರತಿಷ್ಠಿತ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿಯ ಕಿರುಪಟ್ಟಿ ಪ್ರಕಟವಾಗಿದ್ದು, ಕನ್ನಡದ ಸಾಹಿತಿ ಬಾನು ಮುಸ್ತಾಕ್...
ಸವದತ್ತಿ: ಸಹೃದಯ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ಗಾಗಿ ಈ ಬಾರಿ ...
ಬೆಂಗಳೂರು: ಸಮಾಜಮುಖಿ ಪ್ರಕಾಶನವು 2024ನೇ ಸಾಲಿನ ವಾರ್ಷಿಕ ಕಥಾ ಸ್ಪರ್ಧೆಯ ಫಲಿತಾಂಶವನ್ನು ಘೋಷಿಸಿದೆ. ವೀರೇಶ ಶಿವಲ...
©2025 Book Brahma Private Limited.