ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ನೀಡುವ 2022ನೇ ಸಾಲಿನ ‘ಸಾಹಿತ್ಯಶ್ರೀ’ ಪುರಸ್ಕೃತರ ಪಟ್ಟಿ ಪ್ರಕಟ

Date: 07-11-2024

Location: ಬೆಂಗಳೂರು


ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, ಹತ್ತು ಜನ ಸಾಹಿತಿಗಳಿಗೆ 2022ನೆಯ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಈ ಬಾರಿ ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 5 ಪ್ರಶಸ್ತಿಗಳು, ಸೃಜನೇತರ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಹಾಗೂ ಸಾಹಿತ್ಯ ಪರಿಚಾರಿಕೆಗೆ 1 ಪ್ರಶಸ್ತಿಯಂತೆ ಒಟ್ಟು 10 ಜನರಿಗೆ ಸಾಹಿತ್ಯಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

2022ನೇ ವರ್ಷದ ‘ಸಾಹಿತ್ಯಶ್ರೀ’ ಪ್ರಶಸ್ತಿ ಪುರಸ್ಕೃತರು: ಡಾ. ಬಂಜಗೆರೆ ಜಯಪ್ರಕಾಶ, ರೂಮಿ ಹರೀಶ್, ಡಾ. ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ಡಾ. ರಾಜಶೇಖರ ಹತಗುಂದಿ, ಎಚ್.ಎನ್. ಆರತಿ, ಡಾ. ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ, ಚಲಂ ಹಾಡ್ಲಹಳ್ಳಿ.

ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ, ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ ಎಂದು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎಲ್. ಮುಕುಂದರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಪಿ. ಶೇಷಾದ್ರಿ ಸಿನಿಮಾವಲೋಕನಕ್ಕೆ 'ಮುನ್ನುಡಿ'

21-11-2024 ಬೆಂಗಳೂರು

ಬೆಂಗಳೂರು: ಪಿ. ಶೇಷಾದ್ರಿ ಸಿನಿಮಾವಲೋಕನ, ಚಿತ್ರೋತ್ಸವ, ಸಿನಿಮಂಥನ 'ಮುನ್ನುಡಿ' ಚಿತ್ರದಿಂದ ಆರಂಭಗೊಂಡಿದೆ. ಹ...

ವಿಜಯ ರಾಘವೇಂದ್ರ ನಟನೆಯ 'ರುದ್ರಾಭಿಷೇಕಂ' ಚಿತ್ರಕ್ಕೆ ಚಾಲನೆ

21-11-2024 ಬೆಂಗಳೂರು

ಬೆಂಗಳೂರು: ನಮ್ಮ‌ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗ...

87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ. ರು. ಚನ್ನಬಸಪ್ಪ ಆಯ್ಕೆ

20-11-2024 ಬೆಂಗಳೂರು

ಬೆಂಗಳೂರು: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ...