ಮಲರ್ ವಿಳಿ. ಕೆ ಅವರಿಗೆ 2024ನೇ ಸಾಲಿನ ‘ಕೆ.ಎನ್. ವಿಜಯಲಕ್ಷ್ಮಿ ಅನುವಾದ ಪ್ರಶಸ್ತಿ’

Date: 21-10-2024

Location: ಬೆಂಗಳೂರು


ಬೆಂಗಳೂರು: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ. ಮಲರ್ ವಿಳಿ. ಕೆ ಅವರು ಪ್ರತಿಷ್ಠಿತ 2024ನೇ ಸಾಲಿನ ಕೆ.ಎನ್. ವಿಜಯಲಕ್ಷ್ಮಿ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಸಿದ್ಧ ಅನುವಾದಕರಾಗಿರುವ ಡಾ.ಮಲರ್ ವಿಳಿ ಕೆ ಅವರು ಮೂಲತಃ ತಮಿಳುನಾಡಿನವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಸ್ತುತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. “ಮಾಸ್ತಿ ಮತ್ತು ಪುದುಮೈಪಿತ್ತನ್ ಸಣ್ಣ ಕಥೆಗಳ ಒಂದು ಅಧ್ಯಯನ” ಎಂಬ ಇವರ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಕಳೆದ ಎರಡು ದಶಕಗಳಿಂದ ಅನುವಾದ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ-ತಮಿಳು ಭಾಷೆಯ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ. ತಮಿಳು ಸಾಹಿತ್ಯಕ್ಕೆ ಶ್ರೀಮಂತಿಕೆಯನ್ನು ತಂದುಕೊಟ್ಟಿರುವ ಸಂಗಂ ಸಾಹಿತ್ಯವನ್ನು ಕನ್ನಡಕ್ಕೆ ತರುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಮಲರ್ ವಿಳಿ ಅವರ ಪೂರ್ಣ ಪರಿಚಯಕ್ಕಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ..

 

 

MORE NEWS

‘ಸಾಹಿತ್ಯ ಬಂಗಾರ ಪ್ರಶಸ್ತಿ’ ಗೆ ಕುಂ.ವಿ, ಸುಶೀಲಮ್ಮ, ಪ್ರತಿಭಾ ಆಯ್ಕೆ

22-10-2024 ಬೆಂಗಳೂರು

ಬೆಂಗಳೂರು: ಎಸ್. ಬಂಗಾರಪ್ಪ ವಿಚಾರ ವೇದಿಕೆಯಿಂದ ಕೊಡಮಾಡುವ 2024ನೇ ಸಾಲಿನ ’ಸೇವಾ ಬಂಗಾರ ಪ್ರಶಸ್ತಿ’ ಗೆ ...

ಆಮೂರ ಅವರು ಬರವಣಿಗೆಯ ಬದುಕನ್ನು ತಪಸ್ಸಿನಂತೆ ಸಾಗಿಸಿದರು; ರಾಘವೇಂದ್ರ

21-10-2024 ಬೆಂಗಳೂರು

ಧಾರವಾಡ: ಜಿ.ಬಿ. ಜೋಶಿ ಮೆಮೊರಿಯಲ್‌ ಟ್ರಸ್ಟ್‌ ಹಾಗೂ ಡಾ.ಜಿ.ಎಸ್ ಆಮೂರ ಜನ್ಮ ಶತಮಾನೋತ್ಸವ ಸಮಿತಿಯಿಂದ &lsq...

‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭ

21-10-2024 ಬೆಂಗಳೂರು

ಬೆಂಗಳೂರು: ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ...