ಮೊಹಮ್ಮದ್ ಅಜರುದ್ದೀನ್ ರವರಿಗೆ ಪ್ರೊ. ಎಸ್.ವಿ. ರಂಗಣ್ಣ ರಾಜ್ಯ ಪ್ರಶಸ್ತಿ

Date: 30-08-2025

Location: ಮಂಡ್ಯ


ಕೆ.ಆರ್.ಪೇಟೆ, ಮಂಡ್ಯ: ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ರಾಜ್ಯ ಘಟಕ ಹೂವಿನಹಡಗಲಿ ಹಾಗೂ ಜಿಲ್ಲಾ ಘಟಕ ಹಾಸನದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ರಾಜ್ಯಮಟ್ಟದಲ್ಲಿ ಗೌರವಿಸುವ ಕಾರ್ಯಕ್ರಮ ಹಾಸನದಲ್ಲಿ ಜರುಗಲಿದೆ.

ಆಗಸ್ಟ್ 31, 2025 (ಭಾನುವಾರ) ಬೆಳಿಗ್ಗೆ 9:30ಕ್ಕೆ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಧೀಮಂತ ನಾಯಕ ಶ್ರೀ ಎಚ್. ಜ್ವಾಲನಯ್ಯ ಅವರ ಸ್ಮರಣಾರ್ಥ ಕೃತಿ ಬಿಡುಗಡೆ, ಕಾವ್ಯಗಾನ, ಕಲಾ ಕುಂಚ, ಭರತನಾಟ್ಯ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಇದೇ ಸಂದರ್ಭದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಸುಂದರೇಶ್ ಡಿ. ಉಡುವಾರೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಮೊಹಮ್ಮದ್ ಅಜರುದ್ದೀನ್ ರವರಿಗೆ ಪ್ರೊ. ಎಸ್.ವಿ. ರಂಗಣ್ಣ ನವರ ರಾಜ್ಯ ಪ್ರಶಸ್ತಿ ಪ್ರದಾನವಾಗಲಿದೆ.

ಮೊಹಮ್ಮದ್ ಅಜರುದ್ದೀನ್ ಕಿರು ಪರಿಚಯ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಮೂಲದ ಅಜರುದ್ದೀನ್ ಅವರು ತಮ್ಮ ಶಿಕ್ಷಣವನ್ನು ಅಕ್ಕಿಹೆಬ್ಬಾಳು, ಕೃಷ್ಣರಾಜಪೇಟೆ, ಸಾಲಿಗ್ರಾಮ ಹಾಗೂ ಹಾಸನದ ಮಲೆನಾಡು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿ ಸದ್ಯ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟ್ರೈನಿಂಗ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಜರುದ್ದೀನ್ ಅವರು ಸಾಹಿತ್ಯದ ಮೇಲಿನ ಪ್ರೀತಿಯಿಂದಲೇ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅಕ್ಕಿ ಚುಕ್ಕಿ, ನನ್ನ ವಿಳಾಸ ಕವನ ಸಂಕಲನಗಳು, ಸಂಜೆ ವಿಹಾರ, ಲೇಖನ ವಿಹಾರ ಲೇಖನ ಸಂಕಲನಗಳು ಹಾಗೂ ಅಕ್ಕಿಹೆಬ್ಬಾಳು ಗ್ರಾಮ ಕುರಿತಾದ ಹೇಮಾವತಿ ತೀರ ಪರಿಚಯ ಕೃತಿ ಪ್ರಕಟವಾಗಿವೆ. ಸದ್ಯ ಅವಳ ಹೆಜ್ಜೆ ಕಾದಂಬರಿ ಬಿಡುಗಡೆಗೆ ಸಿದ್ಧವಾಗಿದ್ದು, ಐದು ಕೃತಿಗಳು ಮುದ್ರಣ ಹಂತದಲ್ಲಿವೆ.

ಇವರು ವಿಜಯ ಕರ್ನಾಟಕ, ವಿಜಯವಾಣಿ, ವಿಶ್ವವಾಣಿ, ಉದಯಕಾಲ ಸೇರಿದಂತೆ ಹಲವು ರಾಜ್ಯಮಟ್ಟದ ಹಾಗೂ ಪ್ರಾದೇಶಿಕ ಪತ್ರಿಕೆಗಳಲ್ಲಿ 300ಕ್ಕೂ ಹೆಚ್ಚು ಲೇಖನಗಳನ್ನು, 150ಕ್ಕೂ ಹೆಚ್ಚು ಕವನಗಳನ್ನು ಪ್ರಕಟಿಸಿದ್ದಾರೆ. ಮಂಡ್ಯ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ, ಮೈಸೂರು ದಸರಾ ಚಿಗುರು ಕವಿಗೋಷ್ಠಿ ಸೇರಿದಂತೆ 150ಕ್ಕೂ ಹೆಚ್ಚು ಕವಿಗೋಷ್ಠಿಗಳಲ್ಲಿ ತಮ್ಮ ಕವನಗಳನ್ನು ವಾಚಿಸಿ ಗಣ್ಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇವರ ಸಾಹಿತ್ಯ ಸೇವೆಗೆ ರಾಜ್ಯಮಟ್ಟದ ಕಾವ್ಯಶ್ರೀ ಪುರಸ್ಕಾರ ಹಾಗೂ ಕನ್ನಡ ವಿಕಾಸ ರತ್ನ ಪ್ರಶಸ್ತಿ ದೊರೆತಿದೆ. ಜೊತೆಗೆ ಅನ್ವಿಕ ಕವಿಗೋಷ್ಠಿಗಳನ್ನು ಆಯೋಜಿಸಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

MORE NEWS

`Growing Up karantha' ಕೃತಿಯನ್ನ ನಾನು ಹಠದಿಂದಲೇ ಬರೆದಿದ್ದೇನೆ; ಉಲ್ಲಾಸ್‌ ಕಾರಂತ್

07-12-2025 ಬೆಂಗಳೂರು

ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...

ವಿಭಿನ್ನ ಸಾಹಿತ್ಯಗಳ ವಿಚಾರಧಾರೆಗಳ ಸಮ್ಮಿಲನ 'BLF'

07-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...

ಓದುಗರು ಹೊಸತನದ ಕೃತಿಗಳನ್ನು ಓದಬೇಕು: ಶ್ರೀನಿವಾಸ ಪ್ರಭು

07-12-2025 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...