ನಂ.17, 18 ರಂದು ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ

Date: 13-11-2024

Location: ಬೆಂಗಳೂರು


ಬೆಂಗಳೂರು: ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್ ವತಿಯಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಹತ್ತಿರದ ಐಟಿಐ ಬಡಾವಣೆಯಲ್ಲಿರುವ ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನವೆಂಬರ್ 17ರಿಂದ 18ರವರೆಗೆ ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಎರಡು ದಿನದ ಈ ಸಮ್ಮೇಳನದಲ್ಲಿ ವಿವಿಧ ಅಧಿವೇಶನಗಳು ನಡೆಯಲಿವೆ. ಬಾಳಗಾರು ಮಠದ ಅಶೋಭರಾಮಪ್ರಿಯತೀರ್ಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್‌ನ ಉಪಾಧ್ಯಕ್ಷ ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾ- ಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ, ಅಮೆರಿಕದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದ ಕುಲಪತಿ ಬಿ. ವೆಂಕಟಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ, ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಎಚ್.ಬಿ.ಲಕ್ಷ್ಮೀ ನಾರಾಯಣ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕಾ ಮತ್ತು ಹರಿದಾಸ ಸಾಹಿತ್ಯಕ್ಕೆ ಸೇವೆ ಸಲ್ಲಿಸಿರುವ ಬಿ. ಸತ್ಯನಾರಾಯಣಚಾರ್ಯ, ಜಯಲಕ್ಷ್ಮಿ ಮಂಗಳಮೂರ್ತಿ, ಹ.ರಾ. ನಾಗರಾಜಾಚಾರ್ಯ ಸೇರಿದಂತೆ ಹಲವರಿಗೆ ಗೌರವ ಸಮರ್ಪಣೆ ನೆರವೇರಲಿದೆ ಎಂದು ತಿಳಿಸಿದರು.


MORE NEWS

ಪಿ. ಶೇಷಾದ್ರಿ ಸಿನಿಮಾವಲೋಕನಕ್ಕೆ 'ಮುನ್ನುಡಿ'

21-11-2024 ಬೆಂಗಳೂರು

ಬೆಂಗಳೂರು: ಪಿ. ಶೇಷಾದ್ರಿ ಸಿನಿಮಾವಲೋಕನ, ಚಿತ್ರೋತ್ಸವ, ಸಿನಿಮಂಥನ 'ಮುನ್ನುಡಿ' ಚಿತ್ರದಿಂದ ಆರಂಭಗೊಂಡಿದೆ. ಹ...

ವಿಜಯ ರಾಘವೇಂದ್ರ ನಟನೆಯ 'ರುದ್ರಾಭಿಷೇಕಂ' ಚಿತ್ರಕ್ಕೆ ಚಾಲನೆ

21-11-2024 ಬೆಂಗಳೂರು

ಬೆಂಗಳೂರು: ನಮ್ಮ‌ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗ...

87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ. ರು. ಚನ್ನಬಸಪ್ಪ ಆಯ್ಕೆ

20-11-2024 ಬೆಂಗಳೂರು

ಬೆಂಗಳೂರು: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ...