Date: 02-10-2022
Location: ಬೆಂಗಳೂರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಪ್ರಸ್ತುತ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ತಿಳಿಸಿದ್ದಾರೆ.
ಪ್ರಶಸ್ತಿಯು 25,000 ನಗದು ಒಳಗೊಂಡಿದ್ದು, ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.
ಅಕ್ಷರ ಕೆ.ವಿ ಅವರ ಲೇಖಕರ ಪರಿಚಯವನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ...
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಲ್ಲತ್ತಹಳ್ಳಿ ಬಾಲ ಗಂಗಾಧರ ನಗರದ &ls...
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
©2025 Book Brahma Private Limited.