Date: 24-04-2025
Location: ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ‘ಡಾ.ಕೂ.ಗಿ.ಗಿರಿಯಪ್ಪ ಮತ್ತು ಶ್ರೀಮತಿ ಲಕ್ಷ್ಮೀದೇವಮ್ಮ ದತ್ತಿ ಪ್ರಶಸ್ತಿ’ಗೆ ಶಿವರುದ್ರಪ್ಪ, ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ, ಕೆ.ವಿ.ರವಿಕುಮಾರ ಹಾಗೂ ಪೂರ್ಣಚಂದ್ರ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿಯು 2024 ಮತ್ತು 2025ನೇ ಸಾಲಿಗೆ ಈ ಆಯ್ಕೆ ಮಾಡಿದೆ. ರಾಮನಗರದ ಕೂನಮುದ್ದನಹಳ್ಳಿಯ ಕೂ.ಗಿ.ಗಿರಿಯಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ, ನಿವೃತ್ತರಾಗಿದ್ದಾರೆ. ಅವರು ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.
2024ನೇ ಸಾಲಿಗೆ ಆಯ್ಕೆಯಾಗಿರುವ ಕೂನಮುದ್ದನಹಳ್ಳಿಯ ಶಿವರುದ್ರಪ್ಪ ಅವರು ವೀರಗಾಸೆ ಕಲಾವಿದರಾಗಿದ್ದು, 70 ವರ್ಷಗಳಿಂದ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ ಅವರು ಸಿವಿಲ್ ಗುತ್ತಿಗೆದಾರರಾಗಿದ್ದು, ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರು 20ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.
2025ನೇ ಸಾಲಿಗೆ ಆಯ್ಕೆಯಾಗಿರುವ ಕೆ.ವಿ.ರವಿಕುಮಾರ ಅವರು ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಸ್ವಂತ ಪ್ರಕಾಶನ ಸಂಸ್ಥೆಯನ್ನು ನಡೆಸುವುದರೊಂದಿಗೆ ಕೃಷಿಯಲ್ಲಿ ವಿಶೇಷ ಪ್ರಯೋಗಗಳನ್ನು ಮಾಡಿ ಯಶಸ್ಸು ಕಂಡಿದ್ದಾರೆ. ಪೂರ್ಣಚಂದ್ರ ಅವರು ಭೂಗೋಳ ವಿಜ್ಞಾನ ಉಪನ್ಯಾಸಕರಾಗಿ 32 ವರ್ಷಗಳು ಕಾರ್ಯನಿರ್ವಹಿಸಿದ್ದು, ಬರಹಗಾರರಾಗಿ ಮತ್ತು ಗಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
ಬೆಂಗಳೂರು: ರಾಯಚೂರಿನ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ (ರಿ.)ದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಶಿ...
©2025 Book Brahma Private Limited.