59th Jnanpith Award; ಹಿಂದಿ ಲೇಖಕ ವಿನೋದ್ ಕುಮಾರ್  ಶುಕ್ಲಾ ಅವರಿಗೆ 2024ರ ಜ್ಞಾನಪೀಠ ಪ್ರಶಸ್ತಿ

Date: 22-03-2025

Location: ಬೆಂಗಳೂರು


  • 2024ನೇ ಜ್ಞಾನಪೀಠ ಪ್ರಶಸ್ತಿ
  • ಹಿಂದಿ ಲೇಖಕ ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ
  • ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು ಪಡೆದ ಮೊದಲ ಛತ್ತೀಸ್‌ಗಢ ಲೇಖಕ

ನವದೆಹಲಿ: ಹಿಂದಿಯ ಪ್ರಸಿದ್ಧ ಬರಹಗಾರ ವಿನೋದ್ ಕುಮಾರ್ ಅವರು 2024ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 88ರ ಹಿರಿಯ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಅವರು 59ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಛತ್ತೀಸ್‌ಗಢದಿಂದ ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು ಪಡೆದ ಮೊದಲ ಲೇಖಕ ಎಂಬ ಕೀರ್ತಿಗೆ ವಿನೋದ್ ಪಾತ್ರರಾಗಿದ್ದಾರೆ. ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ' ಎಂದು ಹೇಳಿದ್ದಾರೆ. 11 ಲಕ್ಷ ರೂ. ನಗದು ಬಹುಮಾನ, ಕಂಚಿನ ಸರಸ್ವತಿ ಪ್ರತಿಮೆ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುವ ಈ ಪ್ರಶಸ್ತಿಯನ್ನು ಗೆದ್ದ 12ನೇ ಹಿಂದಿ ಬರಹಗಾರ ಇವರಾಗಿದ್ದಾರೆ.

ಇದು ತುಂಬಾ ದೊಡ್ಡ ಪ್ರಶಸ್ತಿ:- “ಇದು ತುಂಬಾ ದೊಡ್ಡ ಪ್ರಶಸ್ತಿ. ನಾನು ಅದನ್ನು ಸ್ವೀಕರಿಸುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ. ನಾನು ಪ್ರಶಸ್ತಿಗಳಿಗೆ ನಿಜವಾಗಿಯೂ ಗಮನ ಕೊಡಲಿಲ್ಲ. ಜನರು ಆಗಾಗ ಮಾತನಾಡುವಾಗ ನಾನು ಜ್ಞಾನಪೀಠಕ್ಕೆ ಅರ್ಹನೆಂದು ಹೇಳುತ್ತಿದ್ದರು. ಆದರೆ ಅದಕ್ಕೆ ಪ್ರತಿಕ್ರಿಯಿಸಲು ಸರಿಯಾದ ಪದಗಳು ನನಗೆ ಎಂದಿಗೂ ಸಿಗಲಿಲ್ಲ” ಎಂದು ವಿನೋದ್ ಶುಕ್ಲಾ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

“ಬರವಣಿಗೆ ಸಣ್ಣ ಕೆಲಸವಲ್ಲ. ನೀವು ಬರೆಯುತ್ತಿದ್ದರೆ, ಬರೆಯುತ್ತಲೇ ಇರಿ. ನಿಮ್ಮ ಬಗ್ಗೆ ವಿಶ್ವಾಸವಿಡಿ. ಮತ್ತು ನಿಮ್ಮ ಕೃತಿ ಪ್ರಕಟವಾದ ನಂತರ ಇತರರು ಪ್ರತಿಕ್ರಿಯೆ ನೀಡಿದರೆ ಅದರ ಬಗ್ಗೆಯೂ ಗಮನ ಕೊಡಿ” ಎಂಬ ಕಿವಿಮಾತನ್ನು ಕಿರಿಯ ಬರಹಗಾರರಿಗೆ ಹೇಳಿದ್ದಾರೆ.


ಜ್ಞಾನಪೀಠ ಆಯ್ಕೆ ಸಮಿತಿ:- ಬರಹಗಾರ್ತಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತೆ ಪ್ರತಿಭಾ ರೇ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನಪೀಠ ಆಯ್ಕೆ ಸಮಿತಿಯು ವಿನೋದ್ ಶುಕ್ಲಾ ಅವರ ಹೆಸರನ್ನು ಅಂತಿಮಗೊಳಿಸಿತು. ಇತರ ಸಮಿತಿ ಸದಸ್ಯರಲ್ಲಿ ಮಾಧವ್ ಕೌಶಿಕ್, ದಾಮೋದರ್ ಮೌಜೋ, ಪ್ರಭಾ ವರ್ಮ, ಅನಾಮಿಕಾ, ಎ. ಕೃಷ್ಣ ರಾವ್, ಪ್ರಫುಲ್ ಶಿಲೇದಾರ್, ಜಾನಕಿ ಪ್ರಸಾದ್ ಶರ್ಮಾ ಮತ್ತು ಜ್ಞಾನಪೀಠ ನಿರ್ದೇಶಕ ಮಧುಸೂದನ್ ಆನಂದ್ ಸೇರಿದ್ದಾರೆ.

MORE NEWS

ಭಾನುಪ್ರಕಾಶ್ ಶರ್ಮ ಮತ್ತು ಶ್ರೀಧರ ದೀಕ್ಷಿತ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ 

25-03-2025 ಬೆಂಗಳೂರು

ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...

ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ಸಾಧಕರನ್ನು ಗುರುತಿಸಿ ಕೊಡುವುದು ಶ್ರೇಷ್ಠ; ಶಿವರಾಜ ತಂಗಡಗಿ

24-03-2025 ಬೆಂಗಳೂರು

ಬೆಂಗಳೂರು: "ಯಾವುದೇ ಒಂದು ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ವ್ಯಕ್ತಿಯ ಸಾಧನೆಯನ್ನು ಗುರುತಿಸಿ ಪ್...

'ತಲ್ಕಿ' ಎನ್ನುವ ಕರುಳು ಹಿಂಡುವ ಕಥೆ

24-03-2025 ಬೆಂಗಳೂರು

ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ...