ವೈ.ಕಂ ಪ್ರಶಸ್ತಿಗೆ ಹಿರಿಯ ಸಾಹಿತಿ ದೇವನೂರ ಅವರು ಆಯ್ಕೆ

Date: 10-12-2024

Location: ಬೆಂಗಳೂರು


ಚೆನ್ನೈ: ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ನೀಡುವ ವೈಕಂ ಪ್ರಶಸ್ತಿಗೆ ಹಿರಿಯ ಸಾಹಿತಿ ದೇವನೂರ ಅವರು ಆಯ್ಕೆಯಾಗಿದ್ದು, ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಅದೇ ರೀತಿ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.

ದೇವನೂರ ಮಹಾದೇವ ಅವರ ಕುಸುಮಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದಲ್ಲದೇ ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್: ಆಳ ಮತ್ತು ಅಗಲ, ಒಡಲಾಳ ಮೊದಲಾದ ಪುಸ್ತಕಗಳು ಮಹಾದೇವ ಅವರ ಕೃತಿಗಳಲ್ಲಿ ಪ್ರಮುಖವಾದವುಗಳಾಗಿವೆ.

ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುವುದು ಎಂದು ಕಳೆದ ವರ್ಷ ವೈಕಂ ಸತ್ಯಾಗ್ರಹ ಶತಮಾನೋತ್ಸವದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಘೋಷಿಸಿದ್ದರು.

MORE NEWS

ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ನಡೆಯಲಿ:  ಅಮರನಾಥ ಗೌಡ  

22-12-2024 ಮಂಡ್ಯ

ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದ...

ಗಣಿನಾಡು ಬಳ್ಳಾರಿಯಲ್ಲಿ ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

22-12-2024 ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ...

ಸರ್ಕಾರಿ ಶಾಲೆಗಳ ಜಮೀನು ಒತ್ತುವರಿಗೆ ನಾವೇ ದನಿಯಾಗಬೇಕು: ಪುರುಷೋತ್ತಮ ಬಿಳಿಮಲೆ 

22-12-2024 ಮಂಡ್ಯ

ಮಂಡ್ಯ:  100 ವರ್ಷ ಪೂರೈಸಿದ ಶಾಲೆಗಳಿಗೆ ಆಟದ ಮೈದಾನ ಇತ್ತು. ಇಂದು ಅವು ಇಲ್ಲ. ಸ್ಥಳೀಯ ರಾಜಕಾಣಿಗಳ, ಪ್ರಭಾವಿಗಳ ...