ಬೇಲೂರು ರಘುನಂದನ್
ಬೇಲೂರಿನ ಗಮಕ ವಿದ್ವಾನ್ ಬಿ.ಕೆ. ವನಮಾಲಾ ಅವರ ಮಾರ್ಗದರ್ಶನದಲ್ಲಿ ಪಾರೀಣ (ಸೀನಿಯರ್) ಪ್ರಥಮ ದರ್ಜೆಯಲ್ಲಿ ಗಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದರು. 2009ರಲ್ಲಿ ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ, ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಇವರನ್ನು ನೇಮಕ ಮಾಡಿದೆ. ಮೊದಲು ಹೊಸಕೋಟೆ ತಾಲೂಕಿನ ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿ, ಸದ್ಯ ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2017ರಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ನಾಟಕ ಅಕಾಡೆಮಿಗೆ ಇವರನ್ನು ಸದಸ್ಯನನ್ನಾಗಿ ನೇಮಕ ಮಾಡಿತು. ಸಾಹಿತ್ಯ, ರಂಗಭೂಮಿ, ಸಿನೆಮಾ, ಸಂಗೀತ ಹಾಗೂ ಪ್ರವಾಸದಲ್ಲಿ ಹೆಚ್ಚಿನ ಆಸಕ್ತಿಯುಳ್ಳ ಇವರು ಕಾಜಾಣದ ಸಂಸ್ಥೆಯ ಮೂಲಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಗಳನ್ನು ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಮಾಡುತ್ತಾ ಬಂದಿದ್ದಾರೆ. ಇವರ ಸಾಹಿತ್ಯ ಕೃತಿಗಳು ಇಂಗ್ಲಿಷ್, ಹಿಂದಿ, ಹಾಗೂ ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ. 2019ನೇ ಸಾಲಿನ ಬೇಲೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಗೌರವ ಇವರಿಗೆ ಲಭಿಸಿದೆ.
More About Author