Story/Poem

ಎಚ್.ಎಸ್. ಅನುಪಮಾ

ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು  ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ಬಿ. ಆರ್. ಅಂಬೇಡ್ಕರ್ ಜೀವನ ಚರಿತ್ರೆ, ನಾನು ಕಸ್ತೂರ್ – ಕಸ್ತೂರಬಾ ಜೀವನ ಕಥನ, ಜನ ಸಂಗಾತಿ ಭಗತ್ - ಜೀವನ ಚರಿತ್ರೆ ಸೇರಿದಂತೆ ಎಂಟು ಜೀವನ ಚರಿತ್ರೆಗಳನ್ನು ರಚಿಸಿದ್ದಾರೆ. 

More About Author

Story/Poem

ಅಳಿ

ಎಳೆಯ ಬಿಕ್ಕುವಿನ ದಟ್ಟಿ ಹರಿದು ಹೋಯಿತು. ಬುದ್ಧಗುರುವನ್ನು ಮುಟ್ಟಿತು ತಲ್ಲಣ 'ಗುರುವೇ, ಹರಿದು ಹೋಯಿತು ದಟ್ಟಿ, ಏನು ಮಾಡುವುದು?' 'ಹರಿದರೇನಾಯಿತು ಮಗೂ, ಹಾಸಿಮಲಗು' ದಿನ ಉರುಳಿದವು ಹಾಸಿ ಹಾಸಿ ಮಲಗಿ ದಟ್ಟಿ ಇನ್ನಷ್ಟು ಜೀರ್ಣ “ಗುರುವೇ, ಹಾ...

Read More...