ಸುನಂದಾ ಕಡಮೆ
ಕಥೆಗಾರ್ತಿ ಸ್ತ್ರೀವಾದಿ ಸುನಂದಾ ಕಡಮೆ ಉತ್ತರ ಕನ್ನಡ ಜಿಲ್ಲೆ, ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದವರು. ಸಮಕಾಲೀನ ವಿಷಯಗಳ ಕುರಿತು ಬರೆಯುವ ಸುನಂದಾ ಅವರು ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ, ತುದಿ ಮಡಚಿಟ್ಟ ಪುಟ ಇವು ನಾಲ್ಕು ಕಥಾಸಂಕಲನಗಳು. ಬರೀ ಎರಡು ರೆಕ್ಕೆ, ದೋಣಿ ನಡೆಸೊ ಹುಟ್ಟು, ಹೈವೇ ನಂ. 63, ಎಳೆನೀರು ಇವು ನಾಲ್ಕು ಕಾದಂಬರಿಗಳು. ಪಿಸುಗುಡುವ ಬೆಟ್ಟಸಾಲು, ಪಡುವಣದ ಕಡಲು, ಕತೆಯಲ್ಲದ ಕತೆ ಇವು ಮೂರು ಪ್ರಬಂಧ ಸಂಕಲನಗಳು ಹಾಗೂ ಸೀಳುದಾರಿ ಎಂಬ ಕವನ ಸಂಕಲನಗಳು ಹೊರಬಂದಿವೆ. ಇವರಿಗೆ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಛಂದ ಪುಸ್ತಕ ಬಹುಮಾನ, ಎಂ.ಕೆ. ಇಂದಿರಾ ಬಹುಮಾನ, ಕಲೇಸಂ ಸುಧಾಮ ದತ್ತಿನಿಧಿಯ 'ತ್ರಿವೇಣಿ' ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕಾರ ದೊರೆತಿದೆ.
More About Author