Book Watchers

ಆಶಾ ರಘು

ಕಾದಂಬರಿಗಾರ್ತಿಯಾದ ಆಶಾ ರಘುರವರು ಹುಟ್ಟಿದ್ದು 1979ರ ಜೂನ್ 18 ನೇ ತಾರೀಖಿನಂದು. ಬೆಂಗಳೂರಿನವರೇ ಆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ಇದೀಗ ಪೂರ್ಣ ಪ್ರಮಾಣದಲ್ಲಿ ಸಾಹಿತ್ಯ ಕೃಷಿಯಲ್ಲಿಯೇ ತೊಡಗಿಸಿಕೊಂಡಿದ್ದಾರೆ. 'ಆವರ್ತ', 'ಗತ', 'ಮಾಯೆ', 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು', 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ, ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Articles

ಸನಿಹವೆನಿಸುವ ಕಸ್ತೂರ್ ಬಾ ಹಾಗೂ ಗಾಂಧಿ

ಕಸ್ತೂರ್ ಬಾ ಮತ್ತು ಗಾಂಧಿ ನಡುವೆ ಇದ್ದದ್ದು ವಿಚಾರ ವೈರುಧ್ಯವೇ ಹೊರತು ವ್ಯಕ್ತಿ ವಿರೋಧವಲ್ಲ. ಗಾಂಧಿ ಮತ್ತು ಕಸ್ತೂರ್ ಬಾ ಅವರ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವೆಂಬಾ ಕಾರಣಕ್ಕೆ ಅವರು ಪರಸ್ಪರ ವಿರೋಧಿ ನೆಲೆಯಲ್ಲಿ ನಿಂತಿದ್ದರೆಂದು ಭಾವಿಸಬೇಕಾಗಿಲ್ಲ.

Read More...