ಜಿ.ಎನ್. ರಂಗನಾಥ ರಾವ್
ಪ್ರಜಾವಾಣಿ ದಿನಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರಾಗಿ ನಿವೃತ್ತರಾಗಿರುವ ಜಿ.ಎನ್. ರಂಗನಾಥರಾವ್ ಅವರು ಅನುವಾದಕ, ಲೇಖಕರಾಗಿ ಸಾಹಿತ್ಯಲೋಕದಲ್ಲಿ ಚಿರಪರಿಚಿತರು. ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ರಂಗನಾಥರಾವ್ ಅವರು ’ನವರಂಗ’ ಕಾವ್ಯನಾಮದಿಂದ ಕೂಡ ಬರವಣಿಗೆ ಮಾಡಿದ್ದಾರೆ. ಕಾದಂಬರಿ, ಸಣ್ಣಕತೆ, ನಾಟಕ, ಪ್ರಬಂಧಗಳನ್ನು ರಚಿಸಿರುವ ಅವರದು ತೂಕಬದ್ಧ ಸಾಹಿತ್ಯ ವಿಮರ್ಶೆ. ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರುವ ಅವರು ವಿದ್ಯಾರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಮಹತ್ವದ ಕೃತಿ ರಚನೆ ಮಾಡಿದ್ದಾರೆ.